ಪ್ರಚಲಿತ

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್- 2k26’ ಇಂಟರ್ಕ್ಲಾಸ್ ಫೆಸ್ಟ್

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಪ್ರಿಸಮ್-2k26’ ಇಂಟರ್‌ಕ್ಲಾಸ್ ಫೆಸ್ಟ್ ಮಾ. 26ರಂದು ನಡೆಯಿತು.

chennai-shopping
maithri

akshaya-college

ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ತಂಡದ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಅವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದರು.

ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲ್ ಮಾತನಾಡಿ, ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಉತ್ತಮ ಅವಕಾಶವಾಗಿದೆ. ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಭವಿಷ್ಯವನ್ನು ರೂಪಿಸಬಹುದು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಸಹಾಯಕ ಪ್ರಾಧ್ಯಾಪಕಿ ರಾಧಿಕಾ ಶೆಟ್ಟಿ ಡಿ.ಎಸ್., ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುನ್ನಡೆಯಲು ನಿರಂತರ ಅಭ್ಯಾಸ, ನೈಜ ಅನುಭವ ಹಾಗೂ ಉತ್ತಮ ಸಂವಹನ ಕೌಶಲ್ಯಗಳ ಅಗತ್ಯ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಮಾತನಾಡಿ, ಶ್ರಮ, ದೃಢ ನಿಶ್ಚಯ ಮತ್ತು ಅನುಭವವೇ ಯಶಸ್ಸಿನ ಮೂಲ ಎಂದರು.

ಅಕ್ಷಯ ಪಿಯು ಕಾಲೇಜ್ ಪ್ರಾಂಶುಪಾಲೆ ಗಂಗಾರತ್ನ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸ್ಪರ್ಧೆಗಳ ಮೂಲಕ ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ಚಟುವಟಿಕೆಗಳು ನಡೆದವು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಬೆಳಿಯೂರುಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಗಣೇಶ್ ಎಸ್. ಮಾತನಾಡಿ, ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಗುರಿ ಸಾಧನೆಯ ಮಹತ್ವವನ್ನು ತಿಳಿಸಿದರು.

ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಬಿಸಿಎ ವಿಭಾಗ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ದ್ವಿತೀಯ ಫ್ಯಾಷನ್ ಡಿಜೈನ್ ವಿಭಾಗ ರನ್ನರ್ ಅಪ್ ಸ್ಥಾನ ಪಡೆದರು.

ಬಿಸಿಎ ವಿಭಾಗ ಮುಖ್ಯಸ್ಥೆ ದೀಕ್ಷಾ ರೈ, ಉಪನ್ಯಾಸಕರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿದರು. ಸೌಜನ್ಯ ಹೆಚ್ ಸ್ವಾಗತಿಸಿದರು. ಸರೋಶ್ ನಾಯಕ್, ಶ್ರೀಮತಿ ಸುಪ್ರಭ ಕೆ. ಅತಿಥಿಗಳನ್ನು ಪರಿಚಯಿಸಿದರು. ಕಾರ್ತಿಕ್ ಪಿ ರೈ, ವಂದಿಸಿದರು. ಮಾನ್ಯ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts