tamanvi
ಪ್ರಚಲಿತ

ಬೆಳ್ತಂಗಡಿ: ನವವಿವಾಹಿತ ಆತ್ಮಹತ್ಯೆ – ತನಿಖೆ ಚುರುಕು!!

ಈ ಸುದ್ದಿಯನ್ನು ಶೇರ್ ಮಾಡಿ

ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.

ಮಾರ್ಚ್ 17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನ ಫೆಬ್ರವರಿ 17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…