tamanvi
ಪ್ರಚಲಿತ

ಗೇರುಕಟ್ಟೆ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ಅಕ್ಕ – ತಂಗಿ!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ.

ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.

ಇವರಿಬ್ಬರು ಮಂಗಳವಾರ ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…