tamanvi
ಪ್ರಚಲಿತ

ಗಂಟಾಲ್’ಕಟ್ಟೆ: ಟಿಪ್ಪರ್ –ಬೈಕ್ ಭೀಕರ ಅಪಘಾತದಲ್ಲಿ ತಾಯಿ – ಮಗ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಮೂಡುಬಿದಿರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ ಕಟ್ಟೆ ನೀರಲ್ಕೆ ವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ.

ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸೀನ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…