ಪ್ರಚಲಿತ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ನೀಡಿದೆ.

chennai-shopping
maithri

ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡಿವೆ. ಈ ಮೂಲಕ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ಆಗಿದೆ.

ಮಾರ್ಚ್ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನ 114.5 ರೂ. ಏರಿಕೆ ಮಾಡಲಾಗಿತ್ತು. ಇದೀಗ ಏ.1 ರಂದು ಪುನಃ ಏರಿಕೆ ಮಾಡುವ ಮೂಲಕ ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಮಾಡಿದ ಬೆಲೆ ಏರಿಕೆಯಾದಂತಾಗಿದೆ.

ವಾಣಿಜ್ಯ ಸಿಲಿಂಡರ್ ಸಿಗ್ತಿಲ್ಲ ಎಂದು ಹೋಟೆಲ್ ಉದ್ಯಮಿಗಳು ಈಗಾಗಲೇ ಪರದಾಡುತ್ತಿದ್ದು, ಇದೀಗ ಸಿಲಿಂಡರ್ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts