ಪ್ರಚಲಿತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಗೊನೆ ಮುಹೂರ್ತ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಗೊನೆ ಮುಹೂರ್ತ ನೆರವೇರಿತು.

chennai-shopping
maithri

ಬೆಳಿಗ್ಗೆ 9.15ಕ್ಕೆ ವೃಷಭ ಲಗ್ನದಲ್ಲಿ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನಡೆಯಿತು. ಮಧ್ಯಾಹ್ನ ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.

ಜಾತ್ರೋತ್ಸವಕ್ಕೆ ಏ.10ರಂದು ಧ್ವಜಾರೋಹಣದ ಮೂಲಕ ಅಧಿಕೃತ ಚಾಲನೆ ದೊರೆಯಲಿದೆ. ಜಾತ್ರೆಯ ಅಂಗವಾಗಿ ಪ್ರತಿದಿನ ಸಂಜೆ ಉತ್ಸವ, ಪೇಟೆ ಸವಾರಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಸಮಿತಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts