ಪ್ರಚಲಿತ

ಅಕ್ರಮ ಜಾನುವಾರು ಸಾಗಾಟ ತಡೆದ ಕಡಬ ಪೊಲೀಸರು: ಓರ್ವ ಸೆರೆ!

ಈ ಸುದ್ದಿಯನ್ನು ಶೇರ್ ಮಾಡಿ

ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

gl

ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ.

ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ವಯ ಕಡಬ ಠಾಣಾ ಪೊಲೀಸರು ಶುಕ್ರವಾರ ಬೆಳಗಿನ ಜಾವ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದಾರೆ. ಈ ವೇಳೆ ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.

ಕಡಬ ಠಾಣಾ ಸಬ್ ಇನ್ ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…