ರಾಜ್ಯ ವಾರ್ತೆ

ಚಾರಣಕ್ಕೆ ತೆರಳಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಪತ್ತೆ! ಫಲಿಸಿದ ಕಾವು ಬಂಗ್ಲೆಗುಡ್ಡೆ ಮಾರಿಗುಡಿ ದೈವಸ್ಥಾನದಲ್ಲಿ ನಡೆದ ಪ್ರಾರ್ಥನೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ತಡಿಯಾಂಡಮೋಳ್ ಟ್ರೆಕ್ಕಿಂಗಿಗೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಅವರು ಭಾರೀ ಶೋಧ ಕಾರ್ಯಾಚರಣೆ ಬಳಿಕ ಭಾನುವಾರ ಸಂಜೆ ಪತ್ತೆಯಾಗಿದ್ದಾರೆ.

chennai-shopping
maithri

ಏಪ್ರಿಲ್ 2ರಿಂದ ನಾಪತ್ತೆಯಾಗಿದ್ದ ಅವರನ್ನು ಹುಡುಕಲು ಭಾರೀ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. 36 ವರ್ಷದ ಶರಣ್ಯ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದು, ದಾರಿ ತಪ್ಪಿದ ಬಗ್ಗೆ ಮಧ್ಯಾಹ್ನ ಕುಟುಂಬಕ್ಕೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಂಪರ್ಕ ಕಡಿತವಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ ಅರಣ್ಯ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿದ್ದರು.

ಇದರ ನಡುವೆ ಯುವತಿ ಸಂಬಂಧಿಕರು ಕಾವು ಬಂಗ್ಲೆಗುಡ್ಡೆ ಮಾರಿಯಮ್ಮ ದೈವಸ್ಥಾನಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದರು. ದೈವಸ್ಥಾನದ ಪ್ರಧಾನ ಅರ್ಚಕರಾದ ಚಂದ್ರ ಅವರು ಮಾರಿಯಮ್ಮನಿಗೆ ಪ್ರಾರ್ಥನೆ ಸಲ್ಲಿಸಿ, ಭಾನುವಾರ ಸಂಜೆಯ ಒಳಗಡೆ ಯುವತಿ ಸಿಗುವುದಾಗಿ ತಿಳಿಸಿದ್ದರು. ಅದರಂತೆ ಯುವತಿ ಭಾನುವಾರ ಸಂಜೆಯ ಒಳಗಡೆ ಸಿಕ್ಕಿದ್ದು, ಶರಣ್ಯ ಅವರನ್ನು ಬಂಗ್ಲೆಗುಡ್ಡೆ ಮಾರಿಯಮ್ಮ ಸನ್ನಿಧಿಗೆ ಕರೆತರುವುದಾಗಿ ತಿಳಿಸಿದ್ದಾರೆ.

ಕಾರ್ಯಾಚರಣೆ:

ಶರಣ್ಯ ಪತ್ತೆಗೆ ಸುಮಾರು 40ಕ್ಕೂ ಹೆಚ್ಚು ಸಿಬ್ಬಂದಿ ಒಳಗೊಂಡ ಹೆಚ್ಚುವರಿ ತಂಡಗಳನ್ನು ನಿಯೋಜಿಸಲಾಗಿತ್ತು. ಡ್ರೋನ್‌ಗಳ ಸಹಾಯದಿಂದ ಮೂರು ದಿನಗಳ ಕಾಲ ಶೋಧ ನಡೆಸಲಾಗಿದ್ದು, ಒಟ್ಟು 9 ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಪೊಲೀಸರು, ನಕ್ಸಲ್ ನಿಗ್ರಹ ದಳ, ಶ್ವಾನದಳ ಹಾಗೂ ಅರಣ್ಯ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರು.

ಕೊನೆಗೂ ಭಾನುವಾರ ಸಂಜೆ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶರಣ್ಯ ಪತ್ತೆಯಾಗಿದ್ದು, ಮೂರು ದಿನಗಳ ಕಾಲ ಕಾಡಿನಲ್ಲಿ ಒಬ್ಬಂಟಿಯಾಗಿ ಕಳೆದಿದ್ದರು. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಅವರು ಸುರಕ್ಷಿತವಾಗಿರುವುದು ತಿಳಿದುಬಂದಿದೆ. ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ಹಾಗೂ ಅರಣ್ಯದ ಹಾದಿಗಳ ಬಗ್ಗೆ ಪರಿಣತಿ ಹೊಂದಿರುವ ಕುಡಿಯ ಜನಾಂಗದ ಯುವಕರು ಅರಣ್ಯದ ಆಳ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದ ವೇಳೆ ಶರಣ್ಯ ಪತ್ತೆಯಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ಸ್ಥಳೀಯರು ಮತ್ತು ಅರಣ್ಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

ಈ ಕಾರ್ಯಾಚರಣೆಗೆ ಸ್ಥಳೀಯ ಗ್ರಾಮಸ್ಥರೂ ಮಹತ್ವದ ಸಹಕಾರ ನೀಡಿದ್ದು, ನಾಲ್ಕು ದಿನಗಳ ನಿರಂತರ ಶ್ರಮಕ್ಕೆ ಫಲ ಸಿಕ್ಕಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಅಧಿಕಾರಿಗಳು ಶೋಧ ಕಾರ್ಯದಲ್ಲಿ ಭಾಗಿಯಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡು, ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ ಪೊಲೀಸರು, ಅರಣ್ಯ ಇಲಾಖೆ, ನಕ್ಸಲ್ ನಿಗ್ರಹ ದಳ ಹಾಗೂ ಸ್ಥಳೀಯರ ಸಹಕಾರದಿಂದ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…