ಪ್ರಚಲಿತ

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ.

maithri

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಈ ವರ್ಷ, ಶೇಕಡಾ 86ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 7,10,363 ವಿದ್ಯಾರ್ಥಿಗಳಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರೀ ಉತ್ತೀರ್ಣ ಶೇಕಡಾವಾರು 73.45 ರಷ್ಟಿದ್ದು, ಈ ವರ್ಷ ಏರಿಕೆ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.

ವಿಜಯನಗರ  ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇಬ್ಬರು ಗೆಳತಿಯರ ಜೊತೆ ಮನೆಯಲ್ಲಿದ್ದೆ: ಸುದ್ದಿಗೋಷ್ಠಿಯಲ್ಲಿ ಅರಿವಿಲ್ಲದೇ ಮಾತನಾಡಿದ ಕೆಕೆಆರ್ ಆಟಗಾರ!!

ಐಪಿಎಲ್ ಟರ‍್ನಮೆಂಟ್ ಶುರುವಾಗುವ ಸಿದ್ಧತೆಯಲ್ಲಿದ್ದಾಗಲೇ ಕೆಕೆಆರ್ ಆಟಗಾರ ಬ್ರಾವೋ ಮಾತು ಇದೀಗ…