tamanvi
ಪ್ರಚಲಿತ

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ.

maithri

ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ, ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಎಲಿಯ ನಿವಾಸಿ, ಅದೇ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ನೇಹಾ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ನೆಲ್ಯಾಡಿ ಕಡೆ ನಡೆದ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ನೀರಕಟ್ಟೆ ಸಮೀಪ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರ್ತಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುವಾದ ನೇಹಾ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿ ದಾಖಲಿಸಲಾಗಿದೆ. ಈ ಸಂಬಂಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಕಾರ್ತಿಕ್ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ…