ಪ್ರಚಲಿತ

ಮಾದಕ ವ್ಯಸನದ ವಿರುದ್ಧ ಜಾಗೃತಿಗಾಗಿ ಕಿರು ಪ್ರಬಂಧ ಸ್ಪರ್ಧೆ | ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಉಪ ವಿಭಾಗ, ಕಸಾಪ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಆಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ – 2026ರ ಅಂಗವಾಗಿ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ (ಪುತ್ತೂರು ಉಪ ವಿಭಾಗ), ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇವುಗಳ ಆಶ್ರಯದಲ್ಲಿ ಕಿರು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

maithri

ಸ್ಪರ್ಧೆಯು ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ನಡೆಯಲಿದೆ. ವಿದ್ಯಾರ್ಥಿ ವಿಭಾಗದ ವಿಷಯ: “ಮಾದಕ ವಸ್ತುಗಳ ದುಷ್ಪರಿಣಾಮಗಳು” ಹಾಗೂ ಸಾರ್ವಜನಿಕ ವಿಭಾಗದ ವಿಷಯ: “ಮಾದಕ ವಸ್ತುಗಳನ್ನು ತಡೆಯುವ ಕ್ರಮಗಳು”.

ಪ್ರಬಂಧವು 250 ಪದಗಳನ್ನು ಮೀರದಂತೆ ಕನ್ನಡದಲ್ಲಿ ಸ್ಪಷ್ಟವಾಗಿ ಟೈಪ್ ಮಾಡಿರಬೇಕು. ಸ್ಪರ್ಧಾರ್ಥಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಸ್ಪರ್ಧೆಯ ವಿಭಾಗವನ್ನು ನಮೂದಿಸಿ, ಜೂನ್ 25, 2026ರಂದು ಸಂಜೆ 6.00 ಗಂಟೆಯೊಳಗೆ ವಾಟ್ಸ್ಆಪ್ ಮೂಲಕ ಕಳುಹಿಸಬೇಕು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳೊಂದಿಗೆ ಪುಸ್ತಕ ಬಹುಮಾನ ಮತ್ತು ಗೌರವ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಗುವುದು.

ಪ್ರಬಂಧಗಳನ್ನು ಸ್ಪರ್ಧೆಯ ಸಂಯೋಜಕರಾದ ಪುತ್ತೂರು ಉಮೇಶ್ ನಾಯಕ್ ಅವರ ಮೊ. 9844401295 ಸಂಖ್ಯೆಗೆ ವಾಟ್ಸ್ಆಪ್ ಮೂಲಕ ಕಳುಹಿಸಬಹುದು.

ಮಾದಕ ಮುಕ್ತ ಸಮಾಜ ನಿರ್ಮಾಣದ ಈ ಸಾರ್ಥಕ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುವಂತೆ ವಿನಂತಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts