ಪ್ರಚಲಿತ

ವಿದ್ಯುತ್ ವಿತರಣೆ ಖಾಸಗೀಕರಣದಿಂದ ಹಿಂದೆ ಸರಿದ ಕಂಪೆನಿ | ಖಾಸಗೀಕರಣದ ವಿರುದ್ಧ ನಿಲುವು ವ್ಯಕ್ತಪಡಿಸಿದ್ದಕ್ಕಾಗಿ ಶಾಸಕ ಅಶೋಕ್ ರೈ ಅವರಿಗೆ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರುದ.ಕ ಜಿಲ್ಲೆ ಸಹಿತ ಕರ್ನಾಟಕ ರಾಜ್ಯದಾದ್ಯಂತ ವಿದ್ಯುತ್ ವಿತರಣೆಯ ಖಾಸಗೀಕರಣ ವಿರುದ್ಧ ರಾಜ್ಯ ಸರಕಾರದ ನಿಲುವು ತೋರುವಲ್ಲಿ ಸರಕಾರದ ಗಮನ ಸೆಳೆದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಜು. 6ರಂದು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ರಾಮಚಂದ್ರ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

maithri

ರಾಜ್ಯದಲ್ಲಿ ವಿದ್ಯುತ್ ವಿತರಣೆಯ ಖಾಸಗೀಕರಣದಿಂದ ರೈತರು, ಕೃಷಿ ಕಾರ್ಮಿಕರು ಹಾಗೂ ಜನ ಸಾಮಾನ್ಯ ಮೇಲಾಗುವ ಪರಿಣಾಮಗಳ ಬಗ್ಗೆ ಮೆಸ್ಕಾಂ ಪುತ್ತೂರು ವಿಭಾಗದ ವತಿಯಿಂದ ಅಧಿಕಾರಿಗಳು ಸಿಬ್ಬಂದಿಗಳು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿಯಾಗಿ ಸರಕಾರದ ಗಮನಕ್ಕೆ‌ ತರುವಂತೆ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ್ದ ಶಾಸಕರು ಸರಕಾರದ ಗಮನಕ್ಕೆ ತರುವ ಭರವಸೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟ ಖಾಸಗೀಕರಣದ ವಿರುದ್ಧ ನಿಲುವು ವ್ಯಕ್ತಪಡಿಸಿದ ಬೆನ್ನಲ್ಲೆ ಅರ್ಜಿ ಸಲ್ಲಿಸಿದ್ದ ಟಾಟಾ ಪವರ್ ಕಂಪನಿಯರು ತಾವು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿರುವುದರಿಂದ ರಾಜ್ಯದಲ್ಲಿ ವಿದ್ಯುತ್ ವಿತರಣೆಯ ಖಾಸಗೀಕರಣ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಪುತ್ತೂರು ವಿಭಾಗದಿಂದ ಶಾಸಕರನ್ನು ಸನ್ಮಾನಿಸಿದರು.

ಮೆಸ್ಕಾಂ ಪುತ್ತೂರು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ, ಗ್ರಾಮಾಂತರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಶಂಕರ್, ಕೆಪಿಟಿಸಿಎಲ್ ನೌಕರರ ಸಂಘ ಕೇಂದ್ರ ಸಮಿತಿ ಅಧ್ಯಕ್ಷ ಪುತ್ತು, ನಗರ ಉಪ ವಿಭಾಗದ ಸಹಾಯಕ ಇಂಜಿನಿಯರ್ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ…