tamanvi
ಕರಾವಳಿಪ್ರಚಲಿತ

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮಿತ್ತಡ್ಕ ಹಾಗೂ ಜತೆ ಕಾರ್ಯದರ್ಶಿಯಾಗಿ ದಿನೇಶ್ ಬಡಗನ್ನೂರುರವರನ್ನು ಆಯ್ಕೆ ಮಾಡಲಾಯಿತು.

ಜು.4ರಂದು ನಡೆದ ಸಂಘದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಳಿದಂತೆ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಘದ ಕಾನೂನು ಸಲಹೆಗಾರರಾಗಿ ಅನಿಕೇತನ ಲಾ ಛೇಂಬರ‍್ಸ್‌ನ ವಕೀಲರಾದ ಕೃಷ್ಣಪ್ರಸಾದ್ ನಡ್ಸಾರ್‌ರವರು ಮುಂದುವರಿಯಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಪುತ್ತೂರು ಘಟಕದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ಹಾಗೂ ಮಾಜಿ ಅಧ್ಯಕ್ಷರು, ಪದಾಽಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

1 of 106