tamanvi
ಪ್ರಚಲಿತಸ್ಥಳೀಯ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ ಕಾರ್ಯಕ್ರಮ ನಡೆಯಲಿದೆ.

maithri

ಆ.14ರಂದು ಶುಕ್ರವಾರ ಸಂಜೆ 7 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಇದೇ ಸಂದರ್ಭದಲ್ಲಿ ನಿವೃತ್ತ ಯೋಧರನ್ನು ಸನ್ಮಾನಿಸಲಾಗುವುದು. ಬಳಿಕ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನವನ್ನು ಬಿಂಬಿಸುವ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಏಕತೆ, ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೆರವಣಿಗೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆಗಳ ವತಿಯಿಂದ ಮನವಿ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…

1 of 159