Gl harusha
ಪ್ರಚಲಿತ

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ

ಈ ಸುದ್ದಿಯನ್ನು ಶೇರ್ ಮಾಡಿ

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾ ಬಳಿ ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ ಸೇರಿದ್ದಾರೆ.

srk ladders
Pashupathi
Muliya

ಮದರಸಾದೊಳಗೆ ಬಿದ್ದಿದ್ದ ಬಾಂಬ್ ಅನ್ನು ಅಲ್ಲಿದ್ದ ವಿದ್ಯಾರ್ಥಿಯೊಬ್ಬ ಚೆಂಡು ಎಂದು ತಿಳಿದು ಎಸೆದಿದ್ದಾನೆ. ಘಟನೆಯಲ್ಲಿ ಮೌಲ್ವಿ ಹಾಗೂ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಂಬ್ ತಯಾರಿಸುವಾಗ ಸ್ಫೋಟ ಸಂಭವಿಸಿದ್ದು, ಇಮಾಮುದ್ದೀನ್ ಮತ್ತು ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಹೆಚ್ಚುವರಿ ಎಸ್ಪಿ ರಾಜ್ ಕಿಶೋರ್ ಸಿಂಗ್ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ರಾಜಕಿಶೋರ್ ಸಿಂಗ್ ಹೇಳಿದ್ದಾರೆ. ಘಟನೆಯ ನಂತರ ಆ ಪ್ರದೇಶದಲ್ಲಿ ನೀರವ ಮೌನ ಆವರಿಸಿತ್ತು.

ಮೊದಲು ಎಲ್ಲರೂ ಸಿಲಿಂಡರ್ ಸ್ಫೋಟ ಎಂದು ಹೇಳಲು ಶುರು ಮಾಡಿದ್ದರು. ಆದರೆ, ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇಲ್ಲಿ ಬಾಂಬ್ ಸ್ಫೋಟ ನಡೆದಿರುವುದು ಬೆಳಕಿಗೆ ಬಂದಿದ್ದು, ಬಳಿಕ ವಿಧಿವಿಜ್ಞಾನ ತಂಡವನ್ನು ಕರೆಸಲಾಗಿದೆ. ಗಾರ್ಖಾದ ಮೋತಿ ರಾಜ್‌ಪುರ ಪ್ರದೇಶವು ಈಗಾಗಲೇ ಪಟಾಕಿ ತಯಾರಿಕೆಯ ವಿಷಯಕ್ಕೆ ಕುಖ್ಯಾತಿ ಪಡೆದಿದೆ.

ಪ್ರತಿದಿನ ಇಂತಹ ಅವಘಡಗಳು ನಡೆಯುತ್ತಲೇ ಇವೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಸರನ್ ಎಸ್ಪಿ ಗೌರವ್ ಮಂಗಲ್ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಅತ್ಯಂತ ಮಹತ್ವ ಪಡೆದಿದೆ. ಈ ಬಗ್ಗೆ ಪೊಲೀಸರು ಪ್ರತಿಯೊಂದು ಕೋನದಲ್ಲಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ವಿಷಯ ಬಹಿರಂಗಗೊಳ್ಳಲಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸದ್ಯ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ವಿಧಿವಿಜ್ಞಾನ ತನಿಖಾ ವರದಿ ಬಂದ ನಂತರವಷ್ಟೇ ಬಾಂಬ್ ಎಷ್ಟು ಶಕ್ತಿಶಾಲಿ ಎಂಬುದು ಸ್ಪಷ್ಟವಾಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts