tamanvi
ಪ್ರಚಲಿತ

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಬೊಳುವಾರು ವಿಶ್ವಕರ್ಮ ಸಭಾಭವನದ ಮುಂಭಾಗದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ದೇಶಭಕ್ತಿಯೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸುಬ್ರಾಯ ಆಚಾರ್ಯ ಮತ್ತು ಮಕ್ಕಳು, ಕೊಂಬೆಟ್ಟು, ಆಶಾ ಜ್ಯುವೆಲ್ಲರಿ, ಕೋರ್ಟ್ ರಸ್ತೆ ಹಾಗೂ ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ. ಅವರು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಆಚಾರ್ಯ ಕೆ., ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ., ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಶಾಂತಿ ಸತೀಶ್ ಆಚಾರ್ಯ, ಗುರುಸೇವಾ ಪರಿಷತ್ ಪುತ್ತೂರು ಮಹಾಮಂಡಲ ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ, ದಕ್ಷಿಣ ಕನ್ನಡ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಸುರೇಂದ್ರ ಆಚಾರ್ಯ, ಬೀರಮಲೆ ವಿಶ್ವಕರ್ಮ ಸಂಘದ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಆಚಾರ್ಯ, ಎಸ್.ಕೆ.ಜಿ.ಐ. ಬ್ಯಾಂಕ್ ಉಪಾಧ್ಯಕ್ಷ ಆನಂದ ಆಚಾರ್ಯ ಅಜ್ಜಿನಡ್ಕ, ನಿರ್ದೇಶಕಿ ರೋಹಿಣಿ ಆಚಾರ್ಯ ನೆಹರುನಗರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…