tamanvi
ಪ್ರಚಲಿತ

ಆ.18ರಂದು ಬ್ರಹ್ಮರಕೊಟ್ಟು ಟೋಲ್‌ಗೇಟ್ ಸ್ಥಗಿತಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಚಲೋ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಿಯಮ ಹಾಗೂ ನಿಗದಿತ ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೊಟ್ಟು ಟೋಲ್‌ಗೇಟ್ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಆ.18ರಂದು ಜಿಲ್ಲಾಧಿಕಾರಿ ಕಚೇರಿ ಚಲೋ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಬೆಳಿಗ್ಗೆ 9.30ಕ್ಕೆ ಬ್ರಹ್ಮರಕೊಟ್ಟು ಟೋಲ್‌ಗೇಟ್ ಬಳಿಯಿಂದ ಜಾಥಾ ಆರಂಭಗೊಳ್ಳಲಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಹಾಗೂ ಕಬಕ ಬ್ಲಾಕ್ ಸಮಿತಿ ವತಿಯಿಂದ ಕಬಕ ಜಂಕ್ಷನ್‌ನಲ್ಲಿ ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಹೋರಾಟದ ಕುರಿತು ಜಾಗೃತಿ ಮೂಡಿಸಲಾಯಿತು.

ಹೆದ್ದಾರಿ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿ, ಸಮರ್ಪಕ ನಿರ್ವಹಣೆ ಇಲ್ಲದ ಹಾಗೂ ಕಳಪೆ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಂದ ಹಲವು ವರ್ಷಗಳಿಂದ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು SDPI ಆರೋಪಿಸಿದೆ.

ಟೋಲ್‌ಗೇಟ್ ಸ್ಥಗಿತಕ್ಕೆ ಆಗ್ರಹಿಸಿ ನಡೆಯುವ ಈ ಪ್ರಜಾಸತ್ತಾತ್ಮಕ ಹೋರಾಟದಲ್ಲಿ ಪಕ್ಷ, ಜಾತಿ ಭೇದ ಮರೆತು ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ SDPI ಮನವಿ ಮಾಡಿದೆ.

ಈ ಸಂದರ್ಭ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ., ಜೊತೆ ಕಾರ್ಯದರ್ಶಿ ರಹೀಂ ಪುತ್ತೂರು, ಕಬಕ ಬ್ಲಾಕ್ ಅಧ್ಯಕ್ಷ ಸಮೀರ್ ಮುರ, ಕಾರ್ಯದರ್ಶಿ ಶಾಕೀರ್ ಕಬಕ ಹಾಗೂ ಪಕ್ಷದ ಬೆಂಬಲಿತ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಉರಿಮಜಲು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…