ಪ್ರಚಲಿತರಾಜ್ಯ ವಾರ್ತೆ

ವಂದೇ ಮಾತರಂಗೆ ಅವಮಾನ ಆರೋಪ: ಸೋನಿಯಾ ಗಾಂಧಿ ವಿರುದ್ಧ ವಿಕಾಸ್ ಪುತ್ತೂರು ದೂರು

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

gl

ಭಾನುವಾರ ಬಿಜೆಪಿ ಕಾರ್ಯಕರ್ತರೊಂದಿಗೆ ಉರ್ವ ಠಾಣೆಗೆ ತೆರಳಿದ ವಿಕಾಸ್ ಪುತ್ತೂರು ಅವರು ಠಾಣಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದರು. ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚಿಸಿರುವುದು ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಎಫ್‌ಐಆರ್ ದಾಖಲಿಸದಿದ್ದರೆ ರಾಜ್ಯದಲ್ಲಿ ರಾಷ್ಟ್ರವಿರೋಧಿ ಸರ್ಕಾರವಿದೆ ಎಂದು ಭಾವಿಸಬೇಕಾಗುತ್ತದೆ ಎಂದು ವಿಕಾಸ್ ಪುತ್ತೂರು ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯವಿದ್ದರೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ಮುಂದಿನ ಕಾನೂನು ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…