tamanvi
ಪ್ರಚಲಿತ

ಬೆಳ್ಳಾರೆ: ನಾಪತ್ತೆಯಾಗಿದ್ದ ತಾಯಿ-ಮಗು ಹುಬ್ಬಳ್ಳಿಯಲ್ಲಿ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ಳಾರೆ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಮೂರು ವರ್ಷದ ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದು, ಬೆಳ್ಳಾರೆ ಪೊಲೀಸರು ಇಬ್ಬರನ್ನೂ ಸುರಕ್ಷಿತವಾಗಿ ಕರೆತಂದು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ಳಿಗೆ ಗ್ರಾಮದ ಕುಂಟಿಕಾನ ನಿವಾಸಿ ರಮಾ ಎ.ವಿ. ಹಾಗೂ ಅವರ ಮೂರು ವರ್ಷದ ಪುತ್ರಿ ಆ.10ರಂದು ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಕುಟುಂಬಸ್ಥರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ತಾಯಿ-ಮಗು ಹುಬ್ಬಳ್ಳಿಯಲ್ಲಿ ಇರುವುದನ್ನು ಪತ್ತೆಹಚ್ಚಿದ್ದಾರೆ. ಬಳಿಕ ಪೊಲೀಸ್ ತಂಡ ಹುಬ್ಬಳ್ಳಿಗೆ ತೆರಳಿ ಇಬ್ಬರನ್ನೂ ಸುರಕ್ಷಿತವಾಗಿ ಬೆಳ್ಳಾರೆಗೆ ಕರೆತಂದಿದೆ.

ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ತಾಯಿ ಮತ್ತು ಮಗುವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…