tamanvi
ಪ್ರಚಲಿತವಾಣಿಜ್ಯ ವಾರ್ತೆ

ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಸತತ 9ನೇ ಬಾರಿ ‘ಸಾಧನಾ ಪ್ರಶಸ್ತಿ’

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.ಗೆ ಸತತ 9ನೇ ಬಾರಿಗೆ ‘ಸಾಧನಾ ಪ್ರಶಸ್ತಿ’ ಲಭಿಸಿದೆ.

2025-26ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿರುವ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಸಹಕಾರಿ ಸಂಸ್ಥೆ ಎಂದು ಗುರುತಿಸಿ, ಆ.22ರಂದು ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಹಾಗೂ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಬ್ಯಾಂಕಿನ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಲ್ಯೊಟ್ಟು, ಎಸ್.ಬಿ. ಜಯರಾಮ್ ರೈ, ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಬಿ. ಅಶೋಕ್ ಕುಮಾರ್ ಶೆಟ್ಟಿ, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್.ಎನ್. ಮನ್ಮಥ ಹಾಗೂ ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ಮಲ್ಲಪ್ಪ ಎನ್. ಪತ್ತಾರ್, ಯು. ರಮೇಶ್ ರಾವ್ ಹಾಗೂ ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…