ಪುತ್ತೂರು: 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆ.27ರಂದು ಬೆಳ್ಳಾರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆ.27ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 5.30ರವರೆಗೆ 33 ಕೆವಿ ಮಾಡಾವು–ಬೆಳ್ಳಾರೆ ಹಾಗೂ 33 ಕೆವಿ ಮಾಡಾವು–ಬೆಳ್ಳಾರೆ–ಗುತ್ತಿಗಾರು ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದರ ಪರಿಣಾಮ 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜು ಪಡೆಯುವ ಬಳಕೆದಾರರು ಗಮನಿಸಿ, ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.


































