tamanvi
ಪ್ರಚಲಿತ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ಗೆ ಮಹತ್ವದ ಗೌರವ ದೊರೆತಂತಾಗಿದೆ.

ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅನ್ನು ಕ್ರಿಯಾಶೀಲವಾಗಿ ಮುನ್ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇದಲ್ಲದೆ, ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ಪುತ್ತೂರು ಟಿಎಪಿಸಿಎಂಎಸ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts