tamanvi
ಪ್ರಚಲಿತ

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು ಪತ್ತೆಹಚ್ಚಿ, ಅದರೊಳಗಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಹಾಗೂ ದಾಖಲೆಗಳನ್ನು ಹಸ್ತಾಂತರಿಸುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಆ.27ರಂದು ಒಳಮೊಗ್ರು ಗ್ರಾಮದ ಕುಂಬ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಚಾಲಕ ಮಹಮ್ಮದ್ ಅಶ್ರಫ್ ಮರಿಕೆಮನೆ ಅವರಿಗೆ ಚಿಕ್ಕ ಪರ್ಸ್‌ವೊಂದು ಸಿಕ್ಕಿದೆ. ಪರ್ಸ್‌ನಲ್ಲಿದ್ದ ಆಧಾರ್ ಕಾರ್ಡ್‌ನಲ್ಲಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿದಾಗ, ಅದು ಪಾಂಡಿತಡ್ಕ ಕೈಕರ ನಿವಾಸಿ ದಿವಾಕರ ಆಚಾರ್ಯ ಅವರಿಗೆ ಸೇರಿದ್ದು ಎಂಬುದು ತಿಳಿದುಬಂದಿದೆ.

ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಪರ್ಸ್‌ ಬಿದ್ದಿರುವುದಾಗಿ ದಿವಾಕರ ಆಚಾರ್ಯ ತಿಳಿಸಿದ್ದಾರೆ. ಪರ್ಸ್‌ನಲ್ಲಿ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ಪ್ರಮುಖ ವಸ್ತುಗಳಿದ್ದವು.

ನಂತರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ ಅವರ ಸಮಕ್ಷಮದಲ್ಲಿ ಆಟೋ ಚಾಲಕ ಮಹಮ್ಮದ್ ಅಶ್ರಫ್ ಅವರು ಪರ್ಸ್‌ ಹಾಗೂ ಅದರೊಳಗಿನ ವಸ್ತುಗಳನ್ನು ದಿವಾಕರ ಆಚಾರ್ಯ ಅವರಿಗೆ ಹಸ್ತಾಂತರಿಸಿದರು.

ಕಳೆದುಹೋದ ಅಮೂಲ್ಯ ವಸ್ತುಗಳನ್ನು ವಾರಸುದಾರರಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಮಹಮ್ಮದ್ ಅಶ್ರಫ್ ಅವರ ಕಾರ್ಯಕ್ಕೆ ಪಿಎಸ್‌ಐ ಸುಷ್ಮಾ ಅವರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…