tamanvi
ಪ್ರಚಲಿತ

ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಚೇತನ್ ಆರ್. ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು.

ಅಧಿಕಾರ ಸ್ವೀಕರಿಸಿದ ಬಳಿಕ ವಲಯ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆಗಳು ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…