tamanvi
ಪ್ರಚಲಿತವಿಶೇಷ

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ ಶಿಕ್ಷಣದ ಹಂತಕ್ಕೆ ಅನುಗುಣವಾಗಿ ₹5 ಸಾವಿರದಿಂದ ಗರಿಷ್ಠ ₹1 ಲಕ್ಷದವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ವೈದ್ಯಕೀಯ ಶಿಕ್ಷಣ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ ₹1 ಲಕ್ಷದವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು 2026ರ ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡಗಳು ಹಾಗೂ ಅಗತ್ಯ ದಾಖಲೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಧಾರ್ಮಿಕ ದತ್ತಿ ಇಲಾಖೆಯ ಕಚೇರಿ ಅಥವಾ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಸಂಪರ್ಕಿಸುವಂತೆ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…