ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇದೇ ವೇಳೆ ಹೈದರಾಬಾದ್‌ನಲ್ಲಿ ನಡೆದ ವಿದ್ಯಾ ಭಾರತಿ ಪ್ರಾಂತ ಮಟ್ಟದ ಕ್ರೀಡಾಕೂಟ–2026ರಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿಘ್ನೇಶ್ ಸಿ. ರೈ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಕೆ. ಸುಹಾನ್ ಎನ್. ರೈ ಉದ್ದ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲಾಸ್ಯ ಸಂತೋಷ್ ಚಕ್ರ ಎಸೆತ ಹಾಗೂ ಭರ್ಚಿ ಎಸೆತ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಈ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕ ಸಂತೋಷ್ ಕುಮಾರ್ ಎನ್. ಮಾರ್ಗದರ್ಶನ ನೀಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

























