ಪ್ರಚಲಿತ

ಪೆರ್ನಾಜೆಯಲ್ಲಿ ಕಾಡಾನೆ ಹಾವಳಿ: ಬಾಳೆ, ಅಡಿಕೆ ಬೆಳೆಗಳಿಗೆ ಭಾರೀ ಹಾನಿ

ಈ ಸುದ್ದಿಯನ್ನು ಶೇರ್ ಮಾಡಿ

ಪೆರ್ನಾಜೆ: ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಹಾಗೂ ಸುತ್ತಮುತ್ತಲಿನ ಕೃಷಿ ಪ್ರದೇಶಗಳಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡು ಕೃಷಿ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿರುವ ಘಟನೆ ನಡೆದಿದೆ.

ರಾತ್ರಿ ವೇಳೆಯಲ್ಲಿ ತೋಟಗಳಿಗೆ ನುಗ್ಗಿದ ಕಾಡಾನೆ, ಬೆಳೆದು ನಿಂತಿದ್ದ ನೂರಾರು ಬಾಳೆ ಹಾಗೂ ಅಡಿಕೆ ಗಿಡಗಳನ್ನು ತುಳಿದು, ಮುರಿದು ಹಾಕಿದೆ. ರೈತರು ಕಷ್ಟಪಟ್ಟು ಬೆಳೆಸಿದ್ದ ಬೆಳೆಗಳು ಕಣ್ಣೆದುರೇ ನಾಶವಾಗಿದ್ದು, ಅಪಾರ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ.

ಈ ಭಾಗದಲ್ಲಿ ಕಳೆದ ಕೆಲ ಸಮಯದಿಂದ ಕಾಡಾನೆಗಳ ಹಾವಳಿ ಪದೇ ಪದೇ ಮರುಕಳಿಸುತ್ತಿರುವುದರಿಂದ ಕೃಷಿಕರು ಆತಂಕದಲ್ಲಿದ್ದಾರೆ. ರಾತ್ರಿ ವೇಳೆ ತೋಟಗಳಿಗೆ ತೆರಳಲು ಕೂಡ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾಡಾನೆ ಹಾವಳಿಯಿಂದ ಕೃಷಿಕರ ಬೆಳೆಗಳು ನಿರಂತರವಾಗಿ ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಾಡಾನೆಯನ್ನು ಸುರಕ್ಷಿತವಾಗಿ ಕಾಡಿಗೆ ಅಟ್ಟಲು ಅಗತ್ಯ ಕ್ರಮ ಕೈಗೊಳ್ಳುವುದರ ಜತೆಗೆ ಹಾನಿಗೊಳಗಾದ ರೈತರಿಗೆ ಶೀಘ್ರ ಸೂಕ್ತ ನಷ್ಟ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…