tamanvi
ಪ್ರಚಲಿತ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ₹62.50 ಏರಿಕೆ; ಹೊಸ ದರ ಇಂದಿನಿಂದ ಜಾರಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಹಬ್ಬದ ಸೀಸನ್ ಆರಂಭಕ್ಕೂ ಮುನ್ನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹62.50ರಷ್ಟು ಹೆಚ್ಚಿಸಲಾಗಿದೆ.

ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಡಾಬಾ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳು ಹೆಚ್ಚಾಗುವ ಸಮಯದಲ್ಲೇ ಈ ದರ ಏರಿಕೆ ವಾಣಿಜ್ಯ ಬಳಕೆದಾರರ ಮೇಲೆ ಹೆಚ್ಚುವರಿ ಹೊರೆ ಬೀಳುವಂತೆ ಮಾಡಿದೆ.

ದೆಹಲಿಯಲ್ಲಿ ಹೊಸ ದರ ₹2,810:

ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ₹62.50 ಏರಿಕೆಯಾಗಿದ್ದು, ₹2,810ಕ್ಕೆ ತಲುಪಿದೆ. ಸೆಪ್ಟೆಂಬರ್‌ನಲ್ಲಿ ಇದೇ ಸಿಲಿಂಡರ್ ಬೆಲೆ ₹2,747.50 ಆಗಿತ್ತು. ಅಕ್ಟೋಬರ್ 1ರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ.

ಇನ್ನು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ಖರೀದಿಸುವ ಹೋಟೆಲ್‌, ರೆಸ್ಟೋರೆಂಟ್‌ ಸೇರಿದಂತೆ ವಿವಿಧ ಉದ್ಯಮಗಳ ಮೇಲೆ ಮಾತ್ರ ಈ ದರ ಏರಿಕೆಯ ನೇರ ಪರಿಣಾಮ ಬೀಳಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…