ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.
ರಜೌರಿಯ ಹಳ್ಳಿಯಲ್ಲಿ ಈ ದಾಳಿ ನಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು ಉಗ್ರರ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿರುವುದಾಗಿ ವರದಿಯಾಗಿದ್ದು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಗುಂಡಿನ ಚಕಮಕಿ ಮುಂದುವರೆದಿರುವುದಾಗಿ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಪಿಟಿಐ ವರದಿ ಪ್ರಕಾರ, ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ರಜೌರಿಯ ಗುಂಧಾ ಪ್ರದೇಶದ ಭದ್ರತಾ ಪಡೆಯ ಪೋಸ್ಟ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಇದೀಗ ಗುಂಧಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು ಗುಂಡಿನ ಚಕಮಕಿ ಕೂಡ ನಡೆಯುತ್ತಿದೆ ಎಂದು ತಿಳಿಸಿದೆ.