All Newsಧಾರ್ಮಿಕರಾಜ್ಯ ವಾರ್ತೆಸ್ಥಳೀಯ

ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ; ತಡವಾದ ಪುಷ್ಪಾರ್ಚನೆ! ಮೈಸೂರು ದೀಪಾಲಂಕಾರ ಅವಧಿ ವಿಸ್ತರಣೆ: DK Shiva kumar

ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು.

ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡರು.

SRK Ladders

ಅಭಿಮನ್ಯು ಆನೆ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಹೆಜ್ಜೆ ಹಾಕಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿ ಪೂರ್ಣಗೊಂಡ ನಂತರ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ.

ತಡವಾಗಿ ನೆರವೇರಿದ ಪುಷ್ಪಾರ್ಚನೆ
ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿತು. 4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ 9 ನಿಮಿಷಗಳು ತಡವಾಗಿದೆ.

ಮೈಸೂರು ದೀಪಾಲಂಕಾರ ಅವಧಿ ವಿಸ್ತರಣೆ

ಮೈಸೂರು ಸೇರಿದಂತೆ ನಾಡಿನ ವಿವಿಧ ಭಾಗಗಳಲ್ಲಿ ಸಂಭ್ರಮದಿಂದ ದಸರಾ ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲೂ ಮೈಸೂರಿನಷ್ಟೇ ಅದ್ಧೂರಿಯಾಗಿ ದಸರಾ ಮಾಡಿದ್ದಾರೆ. ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು ಇನ್ನು 10-12 ದಿನಗಳವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು..

ಇದೇ ವೇಳೆ, ‘ದುಷ್ಟ ಶಕ್ತಿಯ ಎದುರು ಸತ್ಯದ ಜಯ’ ಎಂಬ ಸರ್ಕಾರಿ ಜಾಹೀರಾತಿಗೆ ಬಿಜೆಪಿ ಮತ್ತು ಜೆಡಿಎಸ್ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಮಗೆ ಬಂದಿರುವ ಮಾಹಿತಿಯನ್ನು ನಮ್ಮದೇ ಆದ ಭಾವನೆ ಮೂಲಕ ಜನರಿಗೆ ತಿಳಿಸಿದ್ದೇವೆ. ಉಳಿದ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಎಂದು ಹೇಳಿದರು. ಅಂತೆಯೇ ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4