All Newsದೇಶರಾಜ್ಯ ವಾರ್ತೆ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ!!

ಮುಂಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ. ಅಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ. ಅಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ವಿಮಾನದಲ್ಲಿ 239 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಣವಾಗಿದ್ದು ಕೂಡಲೇ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

SRK Ladders

ಬಳಿಕ ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಎಲ್ಲೂ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಶೋಧ ಕಾರ್ಯ ಮುಂದುವರೆದಿದೆಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 2 ಗಂಟೆಗೆ ಏರ್ ಇಂಡಿಯಾ ವಿಮಾನ ನ್ಯೂಯಾರ್ಕ್‌ಗೆ ಹೊರಟಿತು. ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ಭದ್ರತಾ ಕಾರಣಗಳಿಗಾಗಿ ವಿಮಾನವನ್ನು ದೆಹಲಿಯ ಕಡೆಗೆ ತಿರುಗಿಸಲಾಯಿತು. ವಿಮಾನವನ್ನು ಪ್ರಸ್ತುತ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ ಮತ್ತು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಗುಣಮಟ್ಟದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 3