Gl
ದೇಶಪ್ರಚಲಿತರಾಜ್ಯ ವಾರ್ತೆ

ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌: ಹೊಸ ಸರ್ಕಾರ ರಚನೆಗೆ ಸಜ್ಜು!!

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ.

Pashupathi

ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಭಾನುವಾರ ರಾತ್ರಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

akshaya college

‘ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿಯನ್ನು ನೇಮಕಕ್ಕೂ ಮೊದಲೇ ರಾಷ್ಟ್ರಪತಿ ಆಡಳಿತ ರದ್ದುಗೊಳ್ಳಲಿದೆ’ ಎಂದು ರಾಷ್ಟ್ರಪತಿ ದೌಪದಿ ಮುರ್ಮು ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಸರೆನ್ಸ್ (ಎನ್‌ಸಿ)-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿವೆ. ಗುರುವಾರ ನಡೆದ ನ್ಯಾಷನಲ್ ಕಾನ್ಸರೆನ್ಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ‌ರ್ ಅಬ್ದುಲ್ಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು. ಬಳಿಕ ಮಾತನಾಡಿದ್ದ ಅವರು, ‘ನಾನು ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಎನ್‌ಸಿ, ಕಾಂಗ್ರೆಸ್, ಸಿಪಿಐ(ಎಂ), ಎಎಪಿ ಹಾಗೂ ಪಕ್ಷೇತರರು ಬೆಂಬಲಿಸುವ ಪತ್ರವನ್ನು ಹಸ್ತಾಂತರಿಸಿದ್ದೇನೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಆದಷ್ಟು ಬೇಗನೇ ಪ್ರಮಾಣವಚನ ನಿಗದಿಪಡಿಸುವಂತೆ ವಿನಂತಿ ಮಾಡಿದ್ದೇನೆ’ ಎಂದು ಅವರು ತಿಳಿಸಿದ್ದರು.

ಅಕ್ಟೋಬರ್ 16 ರಂದು(ಬುಧವಾರ) ಪ್ರಮಾಣ ವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ.

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು 2019ರ ಅಕ್ಟೋಬರ್ 31 ರಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಅನ್ನು ಆಗಸ್ಟ್ 5, 2019 ರಂದು ಸಂಸತ್ತು ಅಂಗೀಕರಿಸಿತ್ತು. ಹಿಂದಿನ ರಾಜ್ಯ (ಜಮ್ಮು ಮತ್ತು ಕಾಶ್ಮೀರ)ಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370ನೇ ವಿಧಿಯನ್ನು ಸಹ ಆ ದಿನ ರದ್ದುಗೊಳಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

 ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ| ರೂಪಾಯಿಗೆ ಬಲ ನೀಡಿದ ಕ್ರಮವನ್ನು‌ ಬಹಿರಂಗಪಡಿಸಿದ ವಿನಿಮಿಯ ದತ್ತಾಂಶ!

ಅಮೆರಿಕದ ಡಾಲರ್ ಎದುರು ಸೋಮವಾರ ಭಾರತೀಯ ರೂಪಾಯಿ ಬಲಗೊಂಡಿದ್ದು, ಜಾಗತಿಕವಾಗಿ ಅಮೆರಿಕದ ಕರೆನ್ಸಿ…