ಪ್ರಚಲಿತಸ್ಥಳೀಯ

ಕಾವುಮಾಡ್ನೂರು: ಅಶೋಕ ಜನ-ಮನ ಪ್ರಚಾರ ಸಭೆ | ಜನಮನ ಪುತ್ತೂರಿನ ಜನತೆಯ ಕಾರ್ಯಕ್ರಮ: ಕಾವು ಹೇಮನಾಥ ಶೆಟ್ಟಿ

tv clinic
ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರೈಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಶಾಶಕರಿಗೆ ಆಶೀರ್ವಾದ ಮಾಡಬೇಕು ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರೈಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಶಾಶಕರಿಗೆ ಆಶೀರ್ವಾದ ಮಾಡಬೇಕು ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.

core technologies

ಅವರು ಕಾವು ಮಾಡ್ನೂರು ಕಾಲನಿಯಲ್ಲಿ ನಡೆದ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

akshaya college

ಬಡವ, ಬಲ್ಲಿದ, ಜಾತಿ, ಧರ್ಮಗಳ ಬೇಧವಿಲ್ಲದೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಕಳೆದ ಬಾರಿ ಕಾರ್ಯಕ್ರಮ ನಡೆದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲೇ ಈ ಬಾರಿಯೂ ಕಾರ್ಯಕ್ರಮ ನಡೆಯಲಿದೆ. ಸುಮಾರು 75 ಸಾವಿರಕ್ಕೂ ಮಿಕ್ಕಿ ಬಾಂಧವರು ಭಾಗವಹಿಸಲಿದ್ದಾರೆ ಎಂದು ಹೇಮನಾಥ ಶೆಟ್ಟಿ ಹೇಳಿದರು.

ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ, ಕಾರ್ಯಕ್ರಮದ ಬಗ್ಗೆ ಮನೆ ಮನೆಗೂ ತಿಳಿಸುವ ಕೆಲಸ ನಡೆಯುತ್ತಿದೆ. ಗ್ರಾಮದ ಪ್ರತೀಯೊಬ್ಬರಿಗೂ ಆಹ್ವಾನ ನೀಡಲಾಗುತ್ತಿದ್ದು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಗ್ರಾಪಂ ಸದಸ್ಯರಾದ ದಿವ್ಯನಾಥ ಶೆಟ್ಟಿ ಕಾವು, ಟ್ರಸ್ಟ್ ನ ಯೋಗೀಸ್ ಸಾಮಾನಿ, ಸತೀಶ್ ರೈ ನಿಡ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಗ್ರಾಮದ ಉಜ್ರುಗುಳಿ ಮತ್ತು ಮಾಡಂದೂರು ಕಾಲನಿ, ತೋಟದ ಮೂಲೆ ಕಾಲನಿಯಲ್ಲಿ ಪ್ರಚಾರ ಸಭೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 135