Gl
ಪ್ರಚಲಿತರಾಜ್ಯ ವಾರ್ತೆಸ್ಥಳೀಯ

ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ!

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.

rachana_rai
Pashupathi
akshaya college
Balakrishna-gowda

ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

pashupathi

ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್​ರ ತಾಯಿ ನಿಧನ ರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಹೋಗಿದ್ದಾರೆ ಸುದೀಪ್. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

ಇತ್ತೀಚೆಗಷ್ಟೆ ಬಿಗ್ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು ‘ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ’ ಎಂದಿದ್ದರು.

ಸುದೀಪ್​ ಅವರ ತಾಯಿ ಮಂಗಳೂರು ಮೂಲದವರು, ವಿಕ್ರಾಂತ್ ರೋಣ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು’.

ಸುದೀಪ್​ರ ತಾಯಿ ಸರೋಜಾ ಆಗಾಗ್ಗೆ ಕೆಲವು ಸಿನಿಮಾ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು. ಸುದೀಪ್​ರ ಸಹೋದರಿ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ಸರೋಜಾ ಅವರು ವೇದಿಕೆ ಮೇಲೆ ಮಗ, ಮೊಗನನ್ನು ಕಂಡು ತುಸು ಭಾವುಕರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 135