Gl harusha
ಪ್ರಚಲಿತಸ್ಥಳೀಯ

ಎಂದಿನಂತೆ ನಡೆಯಲಿದೆ ನಾಳೆಯ ಪುತ್ತೂರು ಸಂತೆ!! ಶಾಸಕರ ಸೂಚನೆ ಮೇರೆಗೆ ಕ್ರಮ!

ಪುತ್ತೂರು: ಚುನಾವಣೆ ಹಿನ್ನೆಲೆಯಲ್ಲಿ ರದ್ದುಗೊಂಡ ಸೋಮವಾರ ಎಂತೆ ಎಂದಿನಂತೆ ಕಿಲ್ಲೆ ಮೈದಾನದಲ್ಲೇ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚುನಾವಣೆ ಹಿನ್ನೆಲೆಯಲ್ಲಿ ರದ್ದುಗೊಂಡ ಸೋಮವಾರ ಎಂತೆ ಎಂದಿನಂತೆ ಕಿಲ್ಲೆ ಮೈದಾನದಲ್ಲೇ ನಡೆಯಲಿದೆ.

srk ladders
Pashupathi
Muliya

ಈ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಸೂಚನೆ ನೀಡಿದ್ದು, ವ್ಯಾಪಾರಿಗಳ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ.

ವಿಧಾನ ಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಸಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದಾರೆ.

ಪುತ್ತೂರು ನಗರಸಭಾ ವ್ಯಾಪ್ತಿಯ ಮತಗಟ್ಟೆಯಿಂದ 200 ಮೀಟರ್ ದೂರದಲ್ಲಿ ಕಿಲ್ಲೆ ಮೈದಾನ ಇರುವ ಕಾರಣ ನೀತಿ ಸಂಹಿತೆಯ ನೆಪದಲ್ಲಿ ವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದರು. ಈ ಬಗ್ಗೆ ಸಂತೆ ವ್ಯಾಪಾರಿಗಳು ಶಾಸಕರ ಗಮನಕ್ಕೆ ತಂದಿದ್ದರು. ತಕ್ಷಣ ಸ್ಪಂದಿಸಿದ ಶಾಸಕರು ಅಧಿಕಾರಿಗಳ ಜೊತೆ ಈ ವಿಚಾರದಲ್ಲಿ ಮಾತುಕತೆ ನಡೆಸಿ ವಾರದ ಸಂತೆ ಕಿಲ್ಲೆ ಮೈದಾನದಲ್ಲೇ ನಡೆಯುತ್ತದೆ. ಅದಕ್ಕೆ ಯಾವುದೇ ಅಡಚಣೆಯಾಗಬಾರದು. ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.

ಶಾಸಕರ ಆದೇಶದಂತೆ ನಾಳೆ ಎಂದಿನಂತೆ ಕಿಲ್ಲೆ ಮೈದಾನದಲ್ಲೇ ಸಂತೆ ವ್ಯಾಪಾರ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts