All News

ಮಹಡಿಯಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು!!

ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕೋಡಿ: ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿ ಆಫ್ರೀನ್ ಜಮಾದಾರ್ (17) ಎಂದು ಗುರುತಿಸಲಾಗಿದೆ.

SRK Ladders

ಮಂಗಳವಾರ ಪರೀಕ್ಷೆ ಇದ್ದ ಹಿನ್ನೆಲೆ ಸೋಮವಾರ ಮಧ್ಯರಾತ್ರಿ ವಸತಿ ಶಾಲೆಯ ಮೊದಲ ಮಹಡಿಯಲ್ಲಿ ಓದುತ್ತಾ ಕುಳಿತಿದ್ದ ವೇಳೆ ಘಟನೆ ನಡೆದಿದೆ.

ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts