Gl harusha
ಪ್ರಚಲಿತಸ್ಥಳೀಯ

ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು ಗೆಲುವು

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು (ಅ.24) ಮತ ಎಣಿಕೆ ಪ್ರಕ್ರಿಯೆ ನಡೆಯಿತು.

ಕಾಂಗ್ರೆಸ್ ನ ರಾಜು ಪೂಜಾರಿ ಅವರಿಗಿಂತ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ 1697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಒಟ್ಟು ಚಲಾವಣೆಯಾದ 5912 ಮತಗಳಲ್ಲಿ ಕಿಶೋರ್ ಕುಮಾರ್ -ಬಿಜೆಪಿ-3654, ರಾಜು ಪೂಜಾರಿ- ಕಾಂಗ್ರೆಸ್ 1957, ಅನ್ವರ್ ಸಾದತ್ ಎಸ್ ಡಿಪಿಐ -195 ಮತಗಳನ್ನು ಪಡೆದುಕೊಂಡಿದ್ದಾರೆ.

ಇತರ 9 ಮತಗಳು ಚಲಾವಣೆಯಾಗಿದ್ದು, 87 ಮತಗಳು ಅಸಿಂಧು ಎಂದು ಪರಿಗಣಿಸಲ್ಪಟ್ಟಿವೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts