ಪ್ರಚಲಿತ

ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ!!

tv clinic
ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ ನಲ್ಲಿ ಮಿಲಿಟರಿ ಮೇಲೆ ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಇರಾನ್ ನಡೆಸಿದ ದಾಳಿಗೆ ಪ್ರತಿಕಾರ ತೀರಿಸಲು ಇಸ್ರೇಲ್ ಮುಂದಾಗಿದ್ದು ಅದರಂತೆ ಇಂದು(ಅ. 26) ರಂದು ಮುಂಜಾನೆ ಇರಾನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಿದೆ.

ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ ನಲ್ಲಿ ಮಿಲಿಟರಿ ಮೇಲೆ ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ.

akshaya college

ದಾಳಿಯಿಂದಾದ ಸಾವು ನೋವಿನ ಬಗ್ಗೆ ತಕ್ಷಣದ ಮಾಹಿತಿ ಸಿಕ್ಕಿಲ್ಲ. ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ.

ಇರಾನ್ ಆಡಳಿತ ಮತ್ತು ಅದರ ಪ್ರಾಕ್ಸಿಗಳು ಅಕ್ಟೋಬರ್ 7 ರಿಂದ ಇರಾನ್ ನಿಂದ ನೇರ ದಾಳಿ ಸೇರಿದಂತೆ ಏಳು ಬಗೆಯ ದಾಳಿಗಳನ್ನು ಇಸ್ರೇಲ್ ಮೇಲೆ ಪಟ್ಟುಬಿಡದೆ ನಡೆಸುತ್ತಿವೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆ ತಿಳಿಸಿದೆ.

ಇರಾನಿನ ರಾಜಧಾನಿ ಟೆಹ್ರಾನ್‌ನಲ್ಲಿ, ಸ್ಫೋಟಗಳ ಸದ್ದು ಕೇಳಿಸುತ್ತಿತ್ತು, ಕೆಲವು ಶಬ್ದಗಳು ನಗರದ ಸುತ್ತಲಿನ ವಾಯು ರಕ್ಷಣಾ ವ್ಯವಸ್ಥೆಗಳಿಂದ ಬಂದವು ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳು ಹೇಳಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೈತ್ರಿ ಎಲೆಕ್ಟ್ರಿಕ್ ಕಂ. ವತಿಯಿಂದ ಎಲೆಕ್ಟ್ರಿಷಿಯನ್ಸ್ ಗಳಿಗೆ ಅರಿತು ಕೊಳ್ಳಿ- ಹ್ಯಾವೆಲ್ಸ್ ಫ್ಯಾಕ್ಟರಿ ಭೇಟಿ

ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…