tamanvi
ಕ್ರೀಡೆಪ್ರಚಲಿತ

ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ನ್ಯೂಝಿಲೆಂಡ್: 12 ವರ್ಷಗಳ ಬಳಿಕ ತವರಿನಲ್ಲಿ ಭಾರತಕ್ಕೆ ಸೋಲು!!

D_shiva_bhat
ನ್ಯೂಝಿಲೆಂಡ್ ತನ್ನ ಮೊದಲ ಟೆಸ್ಟ್ ಸರಣಿಯನ್ನು ಭಾರತದಲ್ಲಿ ಗೆದ್ದುಕೊಂಡಿದ್ದು, 12 ವರ್ಷಗಳ ಬಳಿಕ ಭಾರತ ತಂಡ ತವರಿನಲ್ಲಿ ಟೆಸ್ಟ್ ಸರಣಿಯಲ್ಲಿ ಸೋತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುಣೆ: ನ್ಯೂಝಿಲೆಂಡ್ ತನ್ನ ಮೊದಲ ಟೆಸ್ಟ್ ಸರಣಿಯನ್ನು ಭಾರತದಲ್ಲಿ ಗೆದ್ದುಕೊಂಡಿದ್ದು, 12 ವರ್ಷಗಳ ಬಳಿಕ ಭಾರತ ತಂಡ ತವರಿನಲ್ಲಿ ಟೆಸ್ಟ್ ಸರಣಿಯಲ್ಲಿ ಸೋತಿದೆ.

maithri

ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಝಿಲ್ಯಾಂಡ್ ತಂಡವು ಭಾರತಕ್ಕೆ 359ರನ್ ಗುರಿ ನೀಡಿತ್ತು. ಆದರೆ ಭಾರತ 245ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಇದರೊಂದಿಗೆ 113ರನ್ ಗಳ ಅಂತರದಿಂದ ಭಾರತದ ನೆಲದಲ್ಲಿ ನ್ಯೂಝಿಲ್ಯಾಂಡ್ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ.

ಹೊಸದಾಗಿ ನೇಮಕಗೊಂಡ ನಾಯಕ ಟಾಮ್ ಲ್ಯಾಥಮ್ ನೇತೃತ್ವದ ನ್ಯೂಝಿಲ್ಯಾಂಡ್ ತಂಡವು ಅದ್ಭುತ ಪ್ರದರ್ಶನವನ್ನು ನೀಡಿದೆ. ಭಾರತದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ತಕ್ಕಮಟ್ಟಿನ ಪ್ರದರ್ಶನ ನೀಡಿದ್ದಾರೆ. ಜೈಸ್ವಾಲ್ 65 ಎಸೆತಗಳಲ್ಲಿ 77 ರನ್ ಗಳಿಸಿದ್ದು, ಜಡೇಜಾ 42 ರನ್ ಗಳಿಸಿದ್ದಾರೆ.

ಭಾರತ ತವರಿನಲ್ಲಿ 2012-13ರಲ್ಲಿ ಕೊನೆಯ ಭಾರಿಗೆ ಸರಣಿ ಕಳೆದುಕೊಂಡಿತ್ತು, ಅನಂತರ ತವರಿನಲ್ಲಿ ಸತತ 18 ಸರಣಿಗಳಲ್ಲಿ ಗೆದ್ದು ದಾಖಲೆ ಬರೆದಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕ್ರೀಡೆಯೊಂದಿಗೆ ಭಾರತೀಯತೆ ಬೆಳೆಸಿಕೊಳ್ಳಿ: ಸುಬ್ರಮಣ್ಯ ನಟ್ಟೋಜ | ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ

ಪುತ್ತೂರು: ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಜೊತೆಗೆ ಅನೇಕ ಅನೇಕ ಅವಕಾಶಗಳು ವಿದ್ಯಾರ್ಥಿಗಳ…

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…