All Newsಕರಾವಳಿರಾಜ್ಯ ವಾರ್ತೆಸ್ಥಳೀಯ

ರೈಲಿನಲ್ಲಿ ಮೃತ ದೇಹ ಪತ್ತೆ; ಕೊಲೆ ಶಂಕೆ!!

ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಮೃತದೇಹ  ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಎಂಬುವರ ಪುತ್ರ ಮೌಜಾಮ್(35) ಕೊಲೆಯಾದ ಯುವಕ.

SRK Ladders

ಮೃತ ಮೌಜಾಮ್ ಸೇಲ್ಸ್ ರೆಪ್ ಕೆಲಸ ಮಾಡುತ್ತಿದ್ದು ಈತ ಬೆಂಗಳೂರಿನಿಂದ ಮುರ್ಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ. ಅವರ ಕೈಯಲ್ಲಿದ್ದ ಹಣದ ಬ್ಯಾಗ್‌ ಮತ್ತು ಮೊಬೈಲ್ ಸುಲಿಗೆ ಮಾಡುವ ಉದ್ದೇಶ ದಿಂದ ದುಷ್ಕರ್ಮಿಗಳು ಯಾವುದೋ ಸಾಧನದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಉಡುಪಿಯ ರೈಲ್ವೆ ಬೋಗಿಯಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಪತ್ತೆಯಾದ ಮೌಜಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದು ತಿಳಿದು ಬಂದಿದೆ. ಈ ನಡುವೆ ಮೃತರ ಮೊಬೈಲ್ ಲೊಕೇಶನ್ ಸಕಲೇಶಪುರದಲ್ಲಿ ಕೊನೆಯ ಸಂಪರ್ಕ ಕಂಡುಬಂದಿದ್ದು, ಸಕಲೇಶಪುರ ಆಸುಪಾಸಿನಲ್ಲಿ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮೃತ ಸಂಬಂಧಿ ಆರಿಫ್ ಉಲ್ಲಾಖಾನ್ ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 5