ಕಟಪಾಡಿ: ರಸ್ತೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು
ಟೂರಿಸ್ಟ್ ಬಸ್ಸ್ ಢಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಕೊಲ್ಲೂರಿನತ್ತ ತೆರಳುತ್ತಿದ್ದ ಅನ್ಯ ರಾಜ್ಯದ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.