All Newsಕರಾವಳಿಸ್ಥಳೀಯ

20 ವರ್ಷಗಳ ಬಳಿಕ ಆರೋಪಿ ಸೆರೆ! ಪುತ್ತೂರು ನಿವಾಸಿ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು!!

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಪುತ್ತೂರು ನಿವಾಸಿ ಮೊಹಮ್ಮದ್ ಶರೀಫ್ (44) ಬಂಧಿತ.

SRK Ladders

ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2004ರ ನ. 07ರಂದು ನಡೆದ ಕಳ್ಳತನ ಪ್ರಕರಣದ ಆರೋಪಿತ ಶರೀಫ್ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕರ್ನಾಟಕದ ಹಲವೆಡೆ ಮತ್ತು ಕೇರಳ ರಾಜ್ಯದ ಹಲವಾರು ಜಾಗದಲ್ಲಿ ವಿಳಾಸ ಬದಲಾವಣೆ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿತ್ತು.

ಆರೋಪಿಯನ್ನು ನ. 06 ರಂದು ಕೇರಳದ ಕಾಸರಗೋಡಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿಯು ಇತ್ತೀಚಿಗೆ ಕೊಲೆ ಪ್ರಕರಣ ಒಂದರಲ್ಲಿ ಕೇರಳದ ಮಂಜೇಶ್ವರ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದ, ಪಿಎಸ್ಐಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ, ಸಿಬ್ಬಂದಿಗಳಾದ ಹರಿಶ್ಚಂದ್ರ, ಗಣೇಶ ಅವರ ತಂಡ ಕಾರ್ಯಚರಣೆ ನಡೆಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 4