ಮಂಗಳೂರು: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕರಾವಳಿ ಉತ್ಸವ ಕ್ರೀಡಾಂಗಣದಲ್ಲಿ ಜರುಗಿದ್ದು, ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೊದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ಕರ್ನಾಟಕ ರಾಜ್ಯ ಮಾರಾಟ ಫೆಡರೇಶನ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದ್ದು, ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಪ್ರಶಸ್ತಿ ಪಡೆದುಕೊಂಡರು.
ಈ ಸಂದರ್ಭ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ, ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್, ಶಾಸಕ ಹಾಗೂ ಮಾಜಿ ಉಪಮುಖ್ಯ ಮಂತ್ರಿ ಲಕ್ಷ್ಮಣ್ ಸಂಗಪ್ಪ ಸವದಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಭರತ್ ಶೆಟ್ಟಿ ವೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಮಹಾಮಂಡಳ ನಿಯಮಿತದ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ಮಹಾಪೌರ ಮನೋಜ್ ಕುಮಾರ್ ಕೋಡಿಕಲ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಉಕ್ಕೂಟ ನಿಯಮಿತದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ಸಹಕಾರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.