All News

ಉಳ್ಳಾಲ: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ತಕ್ಷಣ ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ  ರಕ್ಷಿಸಿದ್ದಾರೆ

SRK Ladders

ಉಳ್ಳಾಲ ಸಮೀಪ ಮಾಡೂರು ಬಾಡಿಗೆ ಮನೆಯಲ್ಲಿ ಯುವತಿ ವಾಸಿಸುತ್ತಿದ್ದಳು. ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ, ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯ ರಕ್ಷಣೆ ಮಾಡಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

.


ಈ ಸುದ್ದಿಯನ್ನು ಶೇರ್ ಮಾಡಿ

Related Posts