All News

ಶಿರಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ-ಪಾದಚಾರಿ ಮೃತ್ಯು!!

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ನ.25ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ನ.25ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೃಷಿಕ ಕೆ.ಎಂ.ಮತ್ತಾಯಿ ಯಾನೆ ಮತ್ತಚ್ಚನ್ (70ವ.)ಗಾಯಗೊಂಡವರಾಗಿದ್ದಾರೆ. ಇವರು ಮನೆಯಿಂದ ಶಿರಾಡಿ ಪೇಟೆಗೆ ಪಡಿತರ ಪಡೆಯಲು ಬಂದವರು ಶಿರಾಡಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿರುವ ಮತ್ತಾಯಿ ಅವರನ್ನು 108 ಆಂಬುಲೆನ್ಸ್‌ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಕೆ.ಎಂ.ಮತ್ತಾಯಿ ಅವರು ಕೃಷಿ, ಹೈನುಗಾರಿಕೆ ಮಾಡಿ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ ಮರಿಯಕುಟ್ಟಿ, ಪುತ್ರರಾದ ರೆಜಿ, ರಾಜು ಅವರನ್ನು ಅಗಲಿದ್ದಾರೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts