All News

ಬಾಂಗ್ಲಾದ ಹಿಂದೂಗಳ ಮೇಲೆ ದೌರ್ಜನ್ಯ: ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷದ್ ಬೆಂಬಲ | ಮಂಗಳೂರಿನಲ್ಲಿ ಡಿ. 4ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಪುತ್ತೂರಿನಿಂದ ಒಂದೂವರೆ ಸಾವಿರ ಮಂದಿಯ ನಿರೀಕ್ಷೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ 04 ಡಿಸೆಂಬರ್ 2024 ಬುಧವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಸೌಧದ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ 04 ಡಿಸೆಂಬರ್ 2024 ಬುಧವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಸೌಧದ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನಾ ಸಭೆ ನಡೆಯಲಿದೆ. ಈ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷದ್ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ವಿಹಿಪಂ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಜಿಲ್ಲೆಯ ಕಾರ್ಯಕರ್ತರು ಮತ್ತು ಹಿಂದೂಗಳು ಭಾಗವಹಿಸುವಂತೆ ಮನವಿ ಮಾಡುತ್ತೇವೆ. ಪುತ್ತೂರಿನಿಂದ ಸುಮಾರು ಒಂದೂವರೆ ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ ಎಂದರು.

SRK Ladders

ಬಾಂಗ್ಲಾದೇಶದಲ್ಲಿ ಹಿಂದುಗಳನ್ನೇ ಗುರಿಯಾಗಿಟ್ಟುಕೊಂಡು ಇಸ್ಲಾಂ ಮೂಲಭೂತವಾದಿಗಳು ದೌರ್ಜನ್ಯ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕಲ್ಲಿ ಮಕ್ಕಳನ್ನು ಒಳಗೊಂಡಂತೆ ಹಿಂದುಗಳನ್ನು ಬರ್ಬರವಾಗಿ ಹತ್ಯೆ ನಡೆಸುತ್ತಿದ್ದಾರೆ ಅಲ್ಲದೆ ಅನೇಕ ಹೆಣ್ಣುಮಕ್ಕಳ ಮಾನ ಅಪಹರಣ, ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ ಅಲ್ಲಿನ ವಿಗ್ರಹಗಳನ್ನು ಅಪವಿತ್ರಗೊಳಿಸುತ್ತಿದ್ದಾರೆ. ಹಿಂದೂಗಳ ಆಸ್ತಿಪಾಸ್ತಿಗಳನ್ನು ನಾಶ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತಿದ್ದೇವೆ. ಮಾತ್ರವಲ್ಲ, ಅಲ್ಲಿನ ಹಿಂದುಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸುತ್ತಿದ್ದೇವೆ ಎಂದರು.

ಹಿಂದೂಗಳ ಹಕ್ಕಿಗಾಗಿ ಹೋರಾಟ ಮಾಡಿದ್ದ ಇಸ್ಕಾನ್‌ನ ಸ್ವಾಮಿಜಿ ಚಿನ್ನೋಯ್ ಕೃಷ್ಣದಾಸ್ ಅವರನ್ನು ಸುಳ್ಳು ಆರೋಪ ಹಾಕಿ ಬಂಧಿಸಲಾಗಿದೆ. ಅಲ್ಲದೆ ಸ್ವಾಮಿಜೀಯ ಆರೋಗ್ಯ ವಿಚಾರಿಸಲು ಬಂದ ಇಬ್ಬರು ಸ್ವಾಮಿಜೀಗಳನ್ನು ವಿನಾಕಾರಣ ಬಂಧಿಸಿದ್ದಾರೆ. ಈ ಎಲ್ಲಾ ಕೃತ್ಯಗಳನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಅಭದ್ರತೆಯನ್ನು ಎದುರಿಸುತ್ತಿದು, ಅಲ್ಲಿನ ಹಿಂದೂಗಳ ಜೀವನ ಮತ್ತು ಆಸ್ತಿಯ ಸುರಕ್ಷತೆಗೋಸ್ಕರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತ ಸರ್ಕಾರವು ಬಾಂಗ್ಲಾದೇಶ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್, ನಗರ ಅಧ್ಯಕ್ಷ ದಾಮೋದರ ಪಾಟಾಳಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts