tamanvi
ಪ್ರಚಲಿತ

ಉಳ್ಳಾಲ ಗ್ಯಾಸ್ ಸ್ಫೋಟ ಪ್ರಕರಣ: ಏರುತ್ತಿದೆ ಸಾವಿನ ಸಂಖ್ಯೆ!! ಇಹಲೋಕ ತ್ಯಜಿಸಿದ ಮುಗ್ಧ ಕಂದಮ್ಮ!!

D_shiva_bhat
ಗ್ಯಾಸ್‌ ಸಿಲಿಂಡ‌ರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಬಾಲಕಿಯೊಬ್ಬಳು ಗುರುವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಡಿ.8ರಂದು ಮಂಜನಾಡಿ ಗ್ರಾಮದ ಖಂಡಿಕೆ ಎಂಬಲ್ಲಿ ಗ್ಯಾಸ್‌ ಸಿಲಿಂಡ‌ರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಬಾಲಕಿಯೊಬ್ಬಳು ಗುರುವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.

ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಗ್ಯಾಸ್‌ ಸ್ಪೋಟಗೊಂಡು ಇಡೀ ಮನೆ ಹೊತ್ತಿಯುರಿದು, ಮನೆಯೊಳಗಿದ್ದ ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝ ಎಂಬವರು ಗಂಭೀರ ಗಾಯಗಳೊಂದಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುರುವಾರ ಬಾಲಕಿ ಮೆಹದಿಯಾ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಉಳಿದ ಮಕ್ಕಳ ಚಿಕಿತ್ಸೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…