ಪ್ರಚಲಿತ

ಎಟಿಎಂಗೆ ಹಣಹಾಕಲು ಬಂದ SBI ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು! 93 ಲಕ್ಷ ರೂಪಾಯಿ ದೋಚಿದ ದರೋಡೆಕೋರರು

ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಬಂದಿದ್ದರು. ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ್ದು, ಬಳಿಕ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಬೀದ‌ರ್ ನಗರದ ಡಿಸಿ ಕಚೇರಿ ಸಮೀಪ ಇರುವ ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಬಂದಿದ್ದರು.

akshaya college

ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ್ದು, ಬಳಿಕ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ

ಈ ವೇಳೆ ಒಬ್ಬ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬ್ಯಾಂಕ್ ನ ಹೊರಗೆ ಸಾರ್ವಜನಿಕರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬೀದರ್ ನಗರದ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ದರೋಡೆಕೋರರು ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ. ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ಇನ್ನಷ್ಟೇ ತಿಳಿಯಬೇಕಿದೆ. ಬ್ಯಾಂಕಿನ ಕಚೇರಿ ಎದುರು ರಕ್ತಸಿಕ್ತ ಸ್ಥಿತಿಯಲ್ಲಿ ಅವರ ದೇಹ ಬಿದ್ದಿದೆ.

ಘಟನೆಯ ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದರು. ಇಡೀ ಪ್ರದೇಶದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಜನರನ್ನು ಚದುರಿಸಿದರು.

ಸಂಸ್ಥೆಯ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…