ಬಂಟ್ವಾಳ : ಬಂಟ್ವಾಳ ಪುರಸಭಾ ನೂತನ ಮುಖ್ಯಾಧಿಕಾರಿಯಾಗಿ ರೇಖಾ ಜೆ ಶೆಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇಲ್ಲಿನ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲೀನಾ ಬ್ರಿಟ್ಟೋ ಅವರು ಶಿವಮೊಗ್ಗಕ್ಕೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ರೇಖಾ ಶೆಟ್ಟಿ ಅವರನ್ನು ನಿಯೋಜಿಸಲಾಗಿದೆ.
ಪುತ್ತೂರು ಪುರಸಭೆಯ ಮುಖ್ಯಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಬಂಟ್ವಾಳ ಪುರಸಭೆಗೆ ಇದೀಗ ಎರಡನೇ ಬಾರಿಗೆ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸಲಿದ್ದಾರೆ.