pashupathi
ಪ್ರಚಲಿತ

ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 8 ಮಂದಿ ಮೃತ್ಯು!!

tv clinic
ರಕ್ಷಣಾ ಉತ್ಪನ್ನಗಳನ್ನು ತಯಾರಿಸುವ ಆರ್ಡಿನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬಯಿ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ರಕ್ಷಣಾ ಉತ್ಪನ್ನಗಳನ್ನು ತಯಾರಿಸುವ ಆರ್ಡಿನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತರಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. 8 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟ ಸಂಭವಿಸುವ ವೇಳೆ ಕಾರ್ಖಾಣೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ರಕ್ಷಣಾ ತಂಡಗಳು ಶೋಧ ನಡೆಸುತ್ತಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಪೆ ತಿಳಿಸಿದ್ದಾರೆ. ಸ್ಫೋಟದ ಬಿರುಸಿಗೆ ಕಾರ್ಖಾನೆಯ ಛಾವಣಿ ಕುಸಿದಿದ್ದು, ಅದರ ಅಡಿಯಲ್ಲಿ 12 ಮಂದಿ ಸಿಲುಕಿದ್ದರು, ಅವರಲ್ಲಿ ಕೆಲವರನ್ನು ರಕ್ಷಿಸಲಾಗಿದೆ. ಸ್ಫೋಟದ ಶಬ್ದ 5 ಕಿ.ಮೀ ವರೆಗೆ ಕೇಳಿಸಿದೆ. ಸ್ಥಳದಲ್ಲಿ ದಟ್ಟ ಹೊಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…